ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಪಿಎಫ್ ಹಣ ಪಾವತಿಸದೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತಮ್ಮ ಕಂಪೆನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ.ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಪಿಎಫ್ ಹಣ ಪಾವತಿಸದೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೊಟೀಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಸದ್ಯ ದುಬೈಯಲ್ಲಿ ನೆಲೆಸಿರುವ ರಾಬಿನ್ ಉತ್ತಪ್ಪ ವಿರುದ್ಧ ಪ್ರಕರಣ ದಾಖಲಾಗಿರುವ ಕಾರಣ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.