ದೇಶ : ಆಪರೇಷನ್ ಸಿಂಧೂರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಆರೋಪ | ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಬಂಧನ

ದೇಶ : ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಕಾರ್ಯಾಚರಣೆ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿದಿನ ಪತ್ರಿಕಾಗೋಷ್ಠಿ ನೀಡುತ್ತಿದ್ದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರನ್ನು ಲಕ್ಷ್ಯವಿಟ್ಟು, ಸಾಮಾಜಿಕ ಮಾಧ್ಯಮದಲ್ಲಿ ಅವಮಾನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅಲಿ ಖಾನ್ ಅವರನ್ನು ಬಂಧಿಸಲಾಗಿದೆ.

ಹರಿಯಾಣದ ಸೋನಿಪತ್ ಜಿಲ್ಲೆಯ ಜಥೇಡಿ ಗ್ರಾಮದ ಸರಪಂಚರು ನೀಡಿದ ಹೇಳಿಕೆ ಮತ್ತು ಬಿಜೆಪಿಯ ಯುವ ಮೋರ್ಚಾದ ನಾಯಕನೊಬ್ಬರ ದೂರಿನ ಮೇರೆಗೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಸಹಾಯಕ ಪೊಲೀಸ್ ಆಯುಕ್ತ ಅಜಿತ್ ಸಿಂಗ್ ಅವರು ದೂರವಾಣಿ ಮೂಲಕ ನೀಡಿದ ಮಾಹಿತಿಯಲ್ಲಿ, ಅಲಿ ಖಾನ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಹೆಣ್ಣು ಅಧಿಕಾರಿಗಳ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ, ಹರಿಯಾಣ ರಾಜ್ಯ ಮಹಿಳಾ ಆಯೋಗವು ಅಲಿ ಖಾನ್ ಅವರಿಗೆ ನೋಟಿಸ್ ಕಳುಹಿಸಿತ್ತು. ಈ ಹೇಳಿಕೆ ಮಾಧ್ಯಮಗಳಲ್ಲಿ ವ್ಯಾಪಕ ವೈರಲ್ ಆದ ಹಿನ್ನೆಲೆ, ಇದನ್ನು ಬೂಟಾಟಿಕೆ ಎಂದು ಕರೆದಿದ್ದಾರೆ ಎಂಬ ಆರೋಪವೂ ಇದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಮೇ 6 ಮತ್ತು 7ರ ರಾತ್ರಿ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತು. ಈ ಬಳಿಕ ಭಾರತ–ಪಾಕಿಸ್ತಾನ ನಡುವೆ ಉಲ್ಬಣಗೊಂಡ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪಾಕಿಸ್ತಾನವು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದರೂ, ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಎಲ್ಲವನ್ನು ವಿಫಲಗೊಳಿಸಿತು. ಇನ್ನು ಪ್ರಸ್ತುತ, ಪರಸ್ಪರ ಒಪ್ಪಂದದಡಿ ಕದನ ವಿರಾಮ ಮುಂದುವರಿದಿದೆ.

 

Author:

...
Keerthana J

Copy Editor

prajashakthi tv

share
No Reviews