ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆ ಅಪ್ಪು ಪುಸ್ತಕವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಪ್ರಕೃತಿ ಬನವಾಸಿ ಅವರು ಬರೆದಿದ್ದಾರೆ. ಇದು ಅಪ್ಪು ಅವರ ಜೀವನದ ಬಹುಮುಖ್ಯ ಘಟನೆಗಳನ್ನು ವಿವರಿಸುತ್ತದೆ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಈ ಸುದ್ದಿಯನ್ನು ಘೋಷಿಸಲಾಗಿದೆ . ನಟ ಪುನೀತ್ ರಾಜ್‌ಕುಮಾರ್ ಅವರ ಜೀವನ ಚರಿತ್ರೆ ಪುಸ್ತಕ ರೂಪದಲ್ಲಿ ಬರಲಿದೆ. ಅಪ್ಪು ಹೆಸರಿನಲ್ಲೇ ಪುಸ್ತಕ ಬಿಡುಗಡೆಯಾಗಲಿದೆ. ಪುಸ್ತಕದ ಮುಖಪುಟ ರಿಲೀಸ್ ಮಾಡಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಘೋಷಿಸಿದ್ದಾರೆ.
ಪುನೀತ್ ಎನ್ನುವುದಕ್ಕಿಂತ ಅಪ್ಪು ಎಂಬುದೇ ಹೆಚ್ಚು ಸೂಕ್ತ ಎನಿಸುತ್ತದೆ. ಈ ಕಾರಣಕ್ಕೆ ಫ್ಯಾನ್ಸ್ ಕೂಡ ಅವರನ್ನು ಅಪ್ಪು ಎಂದೇ ಕರೆಯುತ್ತಾರೆ. ಹೀಗಾಗಿ ಅಪ್ಪು ನ್ನೋ ಹೆಸರಿನಲ್ಲೇ ಪುನೀತ್ ಬಯೋಗ್ರಫಿ ಬರೆಯಲಾಗಿದೆ. ಅಶ್ವಿನಿ ಮತ್ತು ಪ್ರಕೃತಿ ಬನವಾಸಿ ಒಟ್ಟಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಎರಡು ವರ್ಷಗಳ ಪ್ರಯತ್ನದಿಂದ ಈ ಪುಸ್ತಕ ಹೊರ ಬಂದಿದೆ. ಈ ಪುಸ್ತಕದ ಕವರ್ ಪೇಜ್ ಹೇಗಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ. ಇದಕ್ಕಾಗಿ 2 ವರ್ಷಗಳ ಕಾಲ ಶ್ರಮಿಸಿದ್ದಾರೆ. ಸದ್ಯ ಬುಕ್‌ನ ಕವರ್ ಪೇಜ್ ಹೇಗಿದೆ ಎಂಬುದನ್ನು ಪುನೀತ್ ಜನ್ಮದಿನದಂದು ಅಶ್ವಿನಿ ರಿವೀಲ್ ಮಾಡಿದ್ದಾರೆ.