Bangalore : ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ

BANGALORE : ಜನಪ್ರಿಯ ಕನ್ನಡ ಸೀರಿಯಲ್ ನಟಿ ವೈಷ್ಣವಿ ಗೌಡ ಅನುಕೂಲ್ ಮಿಶ್ರಾ ಎಂಬುವರ ಜೊತೆಗೆ ಅದ್ದೂರಿಯಾಗಿ ಸಪ್ತಪದಿ ತುಳಿದಿದ್ದಾರೆ. ಈ ಮದುವೆ ಕಾರ್ಯಕ್ರಮಕ್ಕೆ ಸಿನಿಮಾ ಹಾಗೂ ಕಿರುತೆರೆಯ ಅನೇಕ ನಟರು ಹಾಗೂ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

ವೈಷ್ಣವಿ ಗೌಡ ಅವರು ಮದುವೆ ಆಗಿರುವ ಹುಡುಗನ ಹೆಸರು ಅನುಕೂಲ್ ಮಿಶ್ರಾ. ಏರ್​ಫೋರ್ಸ್​ ಆಫೀಸರ್ ಆಗಿ ಅವರು ಕೆಲಸ ಮಾಡುತ್ತಿದ್ದಾರೆ. ಅನುಕೂಲ್ ಮಿಶ್ರಾ ಮತ್ತು ವೈಷ್ಣವಿ ಗೌಡ ಅವರದ್ದು ಲವ್ ಮ್ಯಾರೇಜ್ ಅಲ್ಲ, ಅಪ್ಪಟ ಅರೇಂಜ್ ಮ್ಯಾರೇಜ್‌ ಆಗಿದೆ.

ಅದ್ಧೂರಿಯಾಗಿ ನಡೆದ ಈ ಮದುವೆ ಕಾರ್ಯಕ್ರಮದಲ್ಲಿ ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ವಿಶಿಷ್ಟ ಮದುವೆ ವೇಷಭೂಷಣದಲ್ಲಿ ಆಕರ್ಷಣೆ ಎಳೆದರು. ಸಂಪ್ರದಾಯವಾಗಿ ವಿಧಿ-ವಿಧಾನಗಳೊಂದಿಗೆ ಮದುವೆ ನೆರವೇರಿತು. ಮದುವೆಯ ಬಳಿಕ ವೈಷ್ಣವಿ ಗೌಡ ತಮ್ಮ ಮದುವೆ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಫ್ಯಾನ್ಸ್ ಮತ್ತು ಸಹ ಕಲಾವಿದರು ಈ ನೂತನ ದಂಪತಿಗೆ ಶುಭಾಶಯಗಳ ಮಳೆಗೈದಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews