ಬೆಂಗಳೂರು: BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ..!

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು ನಗರ

ಬೆಂಗಳೂರು:

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯಡಿ ಅಧಿಕಾರಕ್ಕೆ ಬಂದಿದ್ದು, ಚುನಾವಣಾ ಪೂರ್ವ ಮಹತ್ವದ ಘೋಷಣೆಯನ್ನು ಮಾಡಲಾಗಿದ್ದು, ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಘೋಷಣೆ ಮಾಡಲಾಗಿತ್ತು. ಆದರೆ ಅಕ್ಕಿಯ ಕೊರತೆಯಿಂದಾಗಿ ಹೆಚ್ಚುವರಿ ಅಕ್ಕಿ ಲಭ್ಯವಾಗದ ಹಿನ್ನೆಲೆ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ನೇತೃತ್ವದ ಸರ್ಕಾರ ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ಉಳಿದ 5 ಕೆ,ಜಿಗೆ ರೂಪಾಯಿ 170ರಂತೆ ನಗದು ವರ್ಗಾವಣೆ ಮಾಡಲಾಗುತ್ತಿತ್ತು.

ಕಾಂಗ್ರೆಸ್‌ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳಿಂಡ ಭಾರೀ ಟೀಕೆಗೆ ಗುರಿಯಾಗಿದ್ದು, ಅವಕಾಶ ಸಿಕ್ಕಾಗಲೆಲ್ಲಾ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಕಾರುತ್ತಿದ್ದರು. ಆದರೀಗ ಕಾಂಗ್ರೆಸ್‌ ಸರ್ಕಾರ ಬಿಪಿಎಲ್‌, ಅಂತ್ಯೋದಯ ಕಾರ್ಡ್‌ ದಾರರಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದು ಹಣದ ಬದಲು ಅಕ್ಕಿ ನೀಡಲು ತೀರ್ಮಾನಿಸಿದೆ.

ಕೇಂದ್ರ ಸರ್ಕಾರ OMSS ಯೋಜನೆಯಡಿ ಹೆಚ್ಚುವರಿ 5 ಕೆ,ಜಿ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಿದೆ. ಇದರಿಂದ ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಖರೀದಿಸಿ ಬಿಪಿಎಲ್‌ ಕಾರ್ಡ್‌ದಾರರಿಗೆ ಹೆಚ್ಚುವರಿ 5 ಕೆ,ಜಿ ಅಕ್ಕಿ ಖರೀದಿಸಲು ತೀರ್ಮಾನಿಸಿದ್ದು, ಈ ಬಗ್ಗೆ ಆಹಾರ ಸಚಿವ ಕೆ.ಎಚ್‌ ಮುನಿಯಪ್ಪ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಂತ್ಯೋದಯ ಯೋಜನೆಯ ಹೆಚ್ಚುವರಿ ಅಕ್ಕಿಯು ಈ ತಿಂಗಳು ಅಂದರೆ ಫೆಬ್ರವರಿಯಿಂದಲೇ ಅಕ್ಕಿ ವಿತರಿಸಲಿದ್ದು ಸರ್ಕಾರದಿಂದ ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಇದೆ.

ಒಟ್ಟಿನಲ್ಲಿ ಕೊಟ್ಟ ಮಾತಿನಂತೆ ಕಾಂಗ್ರೆಸ್‌ ಸರ್ಕಾರ ನುಡಿದಿದ್ದು, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಹೆಚ್ಚುವರಿ 5 ಕೆ,ಜಿ ಅಕ್ಕಿ ಸಿಗುತ್ತಿದ್ದು, BPL ಕಾರ್ಡ್‌ದಾರರಿಗೆ ಸಂತಸದ ವಿಚಾರವಾಗಿದೆ.

 

Author:

...
Editor

ManyaSoft Admin

Ads in Post
share
No Reviews