BANGALORE : ನಿನ್ನೆ ಆರ್‌ಸಿಬಿ (RCB) ವಿಜಯೋತ್ಸವದ ಸಂಭ್ರಮದ ವೇಳೆ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ಮಧ್ಯಾಹ್ನ 2.30ಕ್ಕೆ ಹಂಗಾಮಿ ನ್ಯಾಯಮೂರ್ತಿ ಕಾಮೇಶ್ವರ ರಾವ್ ಅವರ ಪೀಠ ವಿಚಾರಣೆ ನಡೆಸಲಿದೆ. ರಾಜ್ಯ ಸರ್ಕಾರ ಕೂಡ ಈ ಘಟನೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ್ದು, ಘಟನೆಯ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಕ್ರಮಗಳನ್ನು ಕೈಗೊಂಡಿದೆ. ಇದು ಸಾರ್ವಜನಿಕ ಭದ್ರತೆ ಹಾಗೂ ನಿರ್ವಹಣಾ ಲೋಪದ ಕುರಿತಾದ ಗಂಭೀರ ಪ್ರಶ್ನೆಗಳನ್ನು ಒಳಗೊಂಡಿದೆ.
ಅಲ್ಲದೇ ಜನರ ಸಾವು ನೋವಿನ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇನ್ನು ಭದ್ರತಾ ಲೋಪದ ಬಗ್ಗೆ ಸರ್ಕಾರದ ವರದಿ ಕೇಳಿದ್ದೇವೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ