BANGALORE: ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಎರಡು ಬಸ್, ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿಯಾಗಿಲ್ಲ ಎನ್ನಲಾಗಿದೆ.
ಇನ್ನು ಅಪಘಾತದಲ್ಲಿ ಎರಡು ಬಸ್ ಗಳು ಸಂಪೂರ್ಣ ಜಖಂ ಆಗಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನು ವಿಷಯ ತಿಳಿದ ಕೂಡಲೇ ಎಚ್ ಎಸ್ ಆರ್ ಲೇಔಟ್ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ತೀವ್ರತೆಗೆ ಫ್ಲೈಓವರ್‌ನಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನು ತಾತ್ಕಾಲಿಕವಾಗಿ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಬಂದ್ ಮಾಡಲಾಗಿದೆ. ಹೊಸೂರು ಕಡೆಗೆ ಹೋಗುವ ವಾಹನ ಚಾಲಕರಿಗೆ ಫ್ಲೈಓವರ್ ಕೆಳಗಡೆ ಇರುವ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ.