Bangalore : ಕಾಲ್ತುಳಿತ ಪ್ರಕರಣ | ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ

BANGALORE: ಇತ್ತೀಚೆಗೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆ ವೇಳೆ ಭದ್ರತಾ ವೈಫಲ್ಯದಿಂದ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನ ಅಮಾಯಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಪ್ರತಿಭಟನೆ ನಡೆಸುತ್ತಿದೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ  ವಿರೋಧ ಪಕ್ಷದ ನಾಯಕ ಶ್ರೀ ಆರ್. ಅಶೋಕ್, ಡಾ. ಅಶ್ವತ್ಥ ನಾರಾಯಣ, ಶ್ರೀ ಗೋವಿಂದ ಕಾರಜೋಳ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ ಚಲವಾಧಿ ನಾರಾಯಣಸ್ವಾಮಿ, ಅರವಿಂದ ಬೆಳ್ಳದ, ಸಿ.ಟಿ ರವಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸೇರಿದಂತೆ ಹಲವು ಬಿಜೆಪಿ‌ ಸಂಸದರು, ಶಾಸಕರು, ಪರಿಷತ್‌ ಸದಸ್ಯರು, ಪ್ರಮುಖ ನಾಯಕರು ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ಭದ್ರತಾ ವ್ಯವಸ್ಥೆಯ ಲೋಪವನ್ನು ತೀವ್ರವಾಗಿ ಖಂಡಿಸಿದರು. ಪ್ರತಿಪಕ್ಷದ ಮುಖಂಡರು ಸರ್ಕಾರದ ನಿರ್ಲಕ್ಷ್ಯವನ್ನು ಉಲ್ಲೇಖಿಸಿ, ಇದೊಂದು ಆಡಳಿತದ ಅನಾಚಾರದ ಉದಾಹರಣೆ ಎಂದು ಕರೆದರು. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಾಜೀನಾಮೆ ನೀಡುವಂತೆ ವಿರೋಧ ಪಕ್ಷದ ನಾಯಕರು ಆಗ್ರಹಿಸುತ್ತಿದ್ದಾರೆ.

 

Author:

...
Sushmitha N

Copy Editor

prajashakthi tv

share
No Reviews