Bangalore : ಹೃದಯಹೀನ ಸರ್ಕಾರ, ಜನಸಾಮಾನ್ಯರ ಜೀವಕ್ಕೆ ಬೆಲೆಯಿಲ್ಲ ಎಂದ ಆರ್. ಅಶೋಕ್

BANGALORE : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರ ಪ್ರಾಣಹಾನಿಗೆ ಕಾರಣವಾದ ಘಟನೆಗೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನಿಷ್ಕ್ರಿಯತೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿನ್ನೆ ಕಪ್ ಎತ್ತಿ ಫೋಟೋ ತೆಗೆಸಿಕೊಂಡು ಸಂಭ್ರಮ ಪಟ್ಟವರು, ಇವತ್ತು ಸತ್ತ ಅಮಾಯಕರ ಶವಕ್ಕೆ ಹೆಗಲು ಕೊಡಲು ಬರುವುದಿಲ್ಲ. ನಿನ್ನೆ ವಿಮಾನ ನಿಲ್ದಾಣಕ್ಕೆ ಹೋಗಿ ಸೆಲ್ಫಿ ತೆಗೆಸಿಕೊಂಡು ಖುಷಿಪಟ್ಟವರು, ಇವತ್ತು ಸತ್ತವರ ಮನೆಗೆ ಹೋಗಿ ಕಣ್ಣೀರು ಹಾಕುವುದಿಲ್ಲ. ನಿನ್ನೆ ಆಟಗಾರರಿಗೆ ಪೇಟ ತೊಡಿಸಿ ಹಾರ ಹಾಕಿದವರು, ಇವತ್ತು ಶೋಕಸಾಗರದಲ್ಲಿರುವ ಕುಟುಂಬಗಳ ನೆರಳಿಗೂ ಬರುವ ಸ್ಥಿತಿಯಲ್ಲಿಲ್ಲ,” ಎಂದು ಅವರು ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಆರ್‌ ಅಶೋಕ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಾ, “ಈ ಹೃದಯಹೀನ ಸರ್ಕಾರದಲ್ಲಿ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲ,” ಎಂದು ತೀವ್ರ ಟೀಕೆ ಮಾಡಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

 

Author:

...
Sushmitha N

Copy Editor

prajashakthi tv

share
No Reviews