BANGALORE: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯು ಬೇರೆ ಪುರುಷನೊಂದಿಗೆ ಇದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿಬಿದ್ದಿದ್ದು, ಪತಿ ಆಕೆಯನ್ನು ಕೊಂದು, ಪತ್ನಿಯ ರುಂಡದೊಂದಿಗೆ ಪೊಲೀಸರಿಗೆ ಶರಣಾಗಿರುವ ಭೀಕರ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಮಾನಸ (26) ಕೊಲೆಯಾದ ಮಹಿಳೆ, ಶಂಕರ್ (28) ಕೊಲೆ ಮಾಡಿರುವ ಆರೋಪಿ.
ಹೆನ್ನಾಗರ ಸಮೀಪದ ಕಾಚನಾಯಕನಹಳ್ಳಿ ನಿವಾಸಿ ಶಂಕರ್ ಮತ್ತು ಹೆಬ್ಬಗೋಡಿ ನಿವಾಸಿ ಮಾನಸ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಪತ್ನಿ ಮಾನಸ ಬೇರೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿ ಶಂಕರ್ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ. ನೀನು ನನಗೆ ಬೇಡ ಅಂತ ಪ್ರಿಯಕರನ ಜೊತೆಗೇ ಕಳಿಸಿದ್ದಾನೆ. ಆದರೆ ಮಾನಸ ಪದೇ ಪದೇ ಟಾರ್ಚರ್ ಮಾಡುತ್ತಿದ್ದು. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದು, ಇದರಿಂದ ಬೇಸತ್ತ ಪತಿ ಆಕೆಯ ತಲೆ ಕಡಿದು ಠಾಣೆಗೆ ಸೂರ್ಯನಗರ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾನೆ.
ಬಳಿಕ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದಾರೆ.