Bangalore : ಇರಾನ್-ಇಸ್ರೇಲ್ ಉದ್ವಿಗ್ನತೆ | ಅಡುಗೆ ಎಣ್ಣೆ ಬೆಲೆಯಲ್ಲಿ 3-4 ರೂ ಏರಿಕೆ

BANGALORE : ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಗಳಲ್ಲಿ ಭಾರಿ ಅಸ್ತವ್ಯಸ್ತತೆ ಉಂಟಾಗಿದೆ. ರಾಜಕೀಯ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆ, ಕಚ್ಚಾ ತೈಲದ ಬೆಲೆಗಳು ಏರಿಕೆಯಾಗಿದ್ದು, ಇದರ ಪರಿಣಾಮವಾಗಿ ಭಾರತದ ವಿವಿಧ ರಾಜ್ಯಗಳಲ್ಲಿ ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆ ಕಂಡಿದೆ.

ಸದ್ಯ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿದೆ. ಎರಡೂ ದೇಶಗಳು ಪರಸ್ಪರ ದಾಳಿ ನಡೆಸುತ್ತಿವೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಲ ವಸ್ತುಗಳು ಹಾಗೂ ಪದಾರ್ಥಗಳು ದುಬಾರಿಯಾಗುತ್ತಿವೆ. ಒಂದೆಡೆ ಕಚ್ಛಾ ತೈಲ ಬೆಲೆ ಹೆಚ್ಚಾಗುತ್ತಿದ್ದು, ಇನ್ನೊಂದೆಡೆ ಅಡುಗೆ ಎಣ್ಣೆ ಬೆಲೆ ಶನಿವಾರದಿಂದಲೇ ಲೀಟರ್‌ಗೆ 3 ರಿಂದ 4 ರೂ. ಏರಿಕೆಯಾಗಿದೆ

ರಾಜ್ಯದಲ್ಲಿ ಕಳೆದ ಶನಿವಾರದಿಂದ ಅಡುಗೆ ಎಣ್ಣೆ ಬೆಲೆಗಳಲ್ಲಿ ಪ್ರತಿ ಲೀಟರ್‌ಗೆ ಸರಾಸರಿ ₹3 ರಿಂದ ₹4ರಷ್ಟು ಏರಿಕೆಯಾಗಿದೆ. ಸಾಮಾನ್ಯ ಬಳಕೆಯ ಸನ್‌ಫ್ಲವರ್ ಎಣ್ಣೆ, ಪಾಮ್ ಆಯಿಲ್, ಮತ್ತು ಸೋಯಾ ಎಣ್ಣೆಗಳ ಬೆಲೆಯಲ್ಲಿ ಈ ಏರಿಕೆ ಗಮನಿಸಲಾಗಿದೆ. ಹೋಲ್ಸೇಲ್ ಮತ್ತು ರಿಟೇಲ್ ಮಾರುಕಟ್ಟೆಗಳಲ್ಲಿಯೂ ಇದರ ಪ್ರಭಾವ ಸ್ಪಷ್ಟವಾಗಿದೆ.

ಅಡುಗೆ ಎಣ್ಣೆಗಳನ್ನು ಬಹುಮಟ್ಟಿಗೆ ಆಮದು ಮಾಡಿಕೊಳ್ಳುವ ಭಾರತಕ್ಕೆ ಜಾಗತಿಕ ಮಾರುಕಟ್ಟೆಯ ಏರಿಳಿತಗಳು ನೇರವಾಗಿ ಪರಿಣಾಮ ಬೀರುತ್ತವೆ. ತೈಲ ಸಾಗಣೆ ಮಾರ್ಗಗಳಲ್ಲಿ ಉಂಟಾದ ಅನಿಶ್ಚಿತತೆ ಹಾಗೂ ಭದ್ರತಾ ಸಮಸ್ಯೆಗಳ ಕಾರಣವಾಗಿ ಸಾಗಣೆಯ ವೆಚ್ಚವೂ ಹೆಚ್ಚಾಗಿದೆ.

Author:

...
Sushmitha N

Copy Editor

prajashakthi tv

share
No Reviews