ಬೆಂಗಳೂರು: ಮಾರ್ಚ್‌ 7 ಕ್ಕೆ ಕರ್ನಾಟಕ ಬಜೆಟ್‌ ಮಂಡನೆ ದಿನಾಂಕ ಫಿಕ್ಸ್..!

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ನಗರ

ಬೆಂಗಳೂರು:

ಕರ್ನಾಟಕ ಬಜೆಟ್ 2025-26 ಮಂಡನೆಗೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್​ 7ರಂದು 16ನೇಯ ಕರ್ನಾಟಕ ಬಜೆಟ್ ಮಂಡಿಸಲಿದ್ದು. ಮಾರ್ಚ್‌ 3 ರಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಬಜೆಟ್​ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಬಾವಿ ಸಭೆ ನಡೆಸಿ, ಇಲಾಖೆಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಬಜೆಟ್‌ ಪೂರ್ವಬಾವಿ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಮಾರ್ಚ್‌ 3 ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ವರ್ಷದಲ್ಲಿ ಮೊದಲ ಅಧಿವೇಶನವಾದ್ದರಿಂದ ರಾಜ್ಯಪಾಲರ ಭಾಷಣ ಇರಲಿದೆ ಎಂದರು. ಅದಾದ ನಂತರ ಮಾರ್ಚ್‌ 7 ಕ್ಕೆ 2025-2026 ನೇ ಸಾಲಿನ ಬಜೆಟ್‌ ಮಂಡಿಸಲಾಗುತ್ತದೆ ಎಂದರು.

ರೈತರು ಮತ್ತು ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿ, ನಾನು ಸದಾ ರೈತರ ಕುಲದ ಪರವಾಗಿ ಇರುತ್ತೇನೆ. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆಯಾಗಿದೆ ಎಂದು ಭರವಸೆ ನೀಡಿದ್ದಾರೆ. ಕರ್ನಾಟಕ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ಯಾವತ್ತೂ ಕೂಡ ರೈತರ ಜೊತೆ ಇರುತ್ತೇವೆ. ಕೃಷಿಕರ ಜೊತೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರವಾಗಿದೆ. 

ಮೆಟ್ರೋ ರೈಲಿನ ದರ ನಿಗದಿ ಮಾಡಲು ಕೇಂದ್ರ ಸರ್ಕಾರ ಕಮಿಟಿ ಮಾಡಿದೆ. ಅದರಲ್ಲಿ ಇಬ್ಬರು ಕೇಂದ್ರದ ಅಧಿಕಾರಿಗಳು ಇರುತ್ತಾರೆ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ದರ ಏರಿಕೆ ಮಾಡಿವೆ. ಬೆಲೆ ನಿಗದಿ ಮಾಡಲು ನಾವು ಮನವಿ ಕೊಡುತ್ತೇವೆ. ಆದರೆ, ಬೆಲೆ ನಿಗದಿ ಮಾಡುವುದು ಕಮಿಟಿಯವರು ಎಂದು ಸಿದ್ದರಾಮಯ್ಯ ತಿಳಿಸಿದರು.

Author:

...
Editor

ManyaSoft Admin

Ads in Post
share
No Reviews