Bangalore: ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ತೆರೆಯಲು ಕ್ರಮ | ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

BANGALORE: ಬೆಂಗಳೂರು ನಗರದ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳನ್ನು ಸ್ಥಾಪಿಸಲು ಕೆಎಂಎಫ್ (KMF) ಕಡೆಯಿಂದ ಬಿಎಮ್‌ಆರ್‌ಸಿಎಲ್‌ಗೆ (BMRCL) ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ಕುಮಾರಪಾರ್ಕ್‌ನಲ್ಲಿರುವ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ" ಎಂದರು.

ರಾಜ್ಯಾದ್ಯಂತ ನಂದಿನಿ ಬ್ರಾಂಡ್‌ನ ಹಾಲು ಮತ್ತು ಹಾಲು ಉತ್ಪನ್ನಗಳಿಗೆ ಸಾಕಷ್ಟು ಬೇಡಿಕೆ ಇರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಮೂಲಕ ಮೆಟ್ರೋ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳನ್ನು ನೇರವಾಗಿ ನಿಲ್ದಾಣದಲ್ಲೇ ಖರೀದಿಸುವ ಅವಕಾಶ ದೊರೆಯಲಿದೆ.

 

Author:

...
Sushmitha N

Copy Editor

prajashakthi tv

share
No Reviews