Bangalore : ನಿಯಂತ್ರಣ ತಪ್ಪಿದ ಕಾರು ಆಟೋಗೆ ಡಿಕ್ಕಿ | ನಾಲ್ವರಿಗೆ ಗಾಯ

BANGALORE: ಇಂಡಿಕಾ ಕಾರೊಂದು ನಿಯಂತ್ರಣ ತಪ್ಪಿ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಢಿರುವ ಘಟನೆ ಬೆಂಗಳೂರು ನಗರದ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ಹೊಸಕೋಟೆಯಿಂದ ಕೆಆರ್ ಪುರಂ ಕಡೆಗೆ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ, ಮೇಡಹಳ್ಳಿ ಮೇಲ್ಸೇತುವೆ ಬಳಿ ಮುಂದೆ ಹೋಗುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ರಭಸಕ್ಕೆ ಆಟೋ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಒಬ್ಬ ಮಗು ಕೂಡ ಇದ್ದು, ಮಗು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮೂವರು ಸವಾರರೂ ಸಣ್ಣ ಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews