ಬೆಂಗಳೂರು: ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಬೆಂಗಳೂರಿಗೆ ಶಿಫ್ಟ್..!

ಕುರುಬೂರು ಶಾಂತಕುಮಾರ್
ಕುರುಬೂರು ಶಾಂತಕುಮಾರ್
ಬೆಂಗಳೂರು ನಗರ

ಬೆಂಗಳೂರು:

ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ‌ ಈ ಮಧ್ಯೆ, ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಇಂದು ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು.

ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ವ್ಯವಸ್ಥೆ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ, ಶಾಂತಕುಮಾರ್ ಅವರನ್ನು ವೈದ್ಯರು ಮತ್ತು ಇಬ್ಬರು ಸಹಾಯಕರ ತಂಡದೊಂದಿಗೆ ಶಾಂತಕುಮಾರ್ ಅವರನ್ನು ಇಂದು ಬೆಂಗಳೂರಿಗೆ  ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ

Author:

...
Editor

ManyaSoft Admin

Ads in Post
share
No Reviews