BANGALORE: ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕಪ್ ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಆರ್‌ಸಿಬಿ ಅಭಿಮಾನಿಯೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.
ತಡರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಯುವಕ ಬಾರ್‌ಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಆತನ ಕುತ್ತಿಗೆಯ ಭಾಗಕ್ಕೆ ಚಾಕು ಇರಿದು, ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣವೇ ಸ್ಥಳೀಯರು ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಇನ್ನು ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.