ಬೆಂಗಳೂರು: ಶಾಲಾ ಮಕ್ಕಳಿಗಿಲ್ಲ ಚಿಕ್ಕಿ ಭಾಗ್ಯ | ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ರಾಜ್ಯ

ಬೆಂಗಳೂರು:

ಕರ್ನಾಟಕ ಸರ್ಕಾರವು ಅನುದಾನಿತ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜೊತೆ ನೀಡುತ್ತಿದ್ದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಿದೆ. 

ಚಿಕ್ಕಿಯಲ್ಲಿ ಹೆಚ್ಚಿನ ಸಕ್ಕರೆ ಮತ್ತು ಅನ್ಸ್ಯಾಚುರೇಟೆಡ್‌ ಕೊಬ್ಬಿನ ಅಂಶ ಪತ್ತೆಯಾಗಿದ್ದು, ಹಾಗೂ ಮಕ್ಕಳಿಗೆ ಅವಧಿ ಮೀರಿದ ಚಿಕ್ಕಿ ಸಂಗ್ರಹಿಸಿ ಕೊಡ್ತಿದ್ದ ಕಾರಣಕ್ಕೆ, ಇದರಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿದೆ. ಈಗಾಗಲೇ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇದರ ಬಗ್ಗೆ ಆದೇಶ ಹೊರಡಿಸಿದೆ.

ಶಾಲಾ ಮಕ್ಕಳಿಗೆ ಇನ್ಮುಂದೆ ಚಿಕ್ಕಿ ಬದಲಾಗಿ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತದೆ. ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾಗಿರುವ ಬಗ್ಗೆ ಮತ್ತು ವಿತರಣೆಯ ಸಮಸ್ಯೆಗಳ ಕುರಿತು ಧಾರವಾಡ ಮತ್ತು ಕಲಬುರಗಿಯಲ್ಲಿನ ಶಿಕ್ಷಣ ಇಲಾಖೆ ಅಪರ ಆಯುಕ್ತರು ಇಲಾಖೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ.

2021 ರಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮೊಟ್ಟೆಗಳಿಗೆ ಪರ್ಯಾಯವಾಗಿ ಬಾಳೆಹಣ್ಣಿನ ಬದಲಿಗೆ ಚಿಕ್ಕಿ ನೀಡಲು ಆರಂಭಿಸಲಾಗಿತ್ತು. ಮೊಟ್ಟೆ ತಿನ್ನದ ಶಾಲಾ ಮಕ್ಕಳಿಗಾಗಿ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಇದೀಗ ಪೂರಕ ಪೌಷ್ಠಿಕಾಂಶದ ರೂಪದಲ್ಲಿ
ಮತ್ತೆ ಶಾಲಾ ಮಕ್ಕಳಿಗೆ ಬಾಳೆಹಣ್ಣು ಮತ್ತು ಮೊಟ್ಟೆ ವಿತರಿಸಲು ಸರ್ಕಾರ ಆದೇಶಿಸಿದೆ.

 

Author:

...
Editor

ManyaSoft Admin

Ads in Post
share
No Reviews