BANGALORE : ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮಕ್ಕೆ ಸೇರಿದ ಯುವಕನೋರ್ವ ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಹೇಶ್ ಬಡದಾಳೆ (30) ಎಂಬುವರು ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿಯಾಗಿದ್ದಾನೆ.
ಮಹೇಶ್ ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು, ಏಕಾಏಕಿ ಬೆಂಗಳೂರಿನ ತನ್ನ ನಿವಾಸದಲ್ಲಿ ಮಹೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಈತ ಕೆಲವು ದಿನಗಳಿಂದ ಕುಡಿತದ ಚಟ ಹಾಗೂ ಸಾಲದ ಒತ್ತಡದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿದು ಸ್ಥಳೀಯ ಪೋಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತದೇಹವನ್ನು ಬೆಂಗಳೂರು ನಿಂದ ಕಲಖೋರಾ ಗ್ರಾಮಕ್ಕೆ ರವಾನಿಸಲಾಗಿದೆ. ಅಲ್ಲದೇ ಮುಡಬಿ ಪೊಲೀಸ್ ಠಾಣೆಯ ಅಧಿಕಾರಿಗಳು ಕೂಡ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯುಡಿಆರ್ (Unnatural Death Report) ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.