ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಇಂದು ನಗದು ಬಹುಮಾನ ಘೋಷಣೆ ಮಾಡಿದ್ದಾರೆ. 2025ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂಪಾಯಿ ನಗದು ಬಹುಮಾನ ನೀಡಿದೆ. ಇದರಲ್ಲಿ ಟೀಂ ಇಂಡಿಯಾ ಆಟಗಾರರು, ಕೋಚಿಂಗ್, ಸಹಾಯಕ ಸಿಬ್ಬಂದಿ ಮತ್ತು ಬಿಸಿಸಿ ಆಯ್ಕೆ ಸಮಿತಿ ಸದಸ್ಯರಿಗೆ ಕ್ರಮವಾಗಿ ನಗದು ಬಹುಮಾನವನ್ನು ಹಂಚಿಕೆ ಮಾಡಲಾಗುತ್ತದೆ.
ಕಳೆದ ವರ್ಷ ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
ಮಾರ್ಚ್ 9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಸ್ನಲ್ಲಿ ಭಾರತ ಗೆಲುವು ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಇದರ ಬಳಿಕ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಮೊದಲ ಪಂದ್ಯದಲ್ಲೇ ಬಾಂಗ್ಲಾದೇಶ ವಿರುದ್ಧ 6 ವಿಕೆಟ್ಗಳಿಂದ ಗೆಲುವು ಸಾಧಿಸಿದ್ದ ಭಾರತ ಬಳಿಕ ಪಾಕಿಸ್ತಾನ ವಿರುದ್ಧ ಆರು ವಿಕೆಟ್ಗಳ ಜಯ ಸಾಧಿಸಿತ್ತು. ನ್ಯೂಜಿಲೆಂಡ್ ವಿರುದ್ಧ 44 ರನ್ಗಳ ಜಯ ಪಡೆದಿತ್ತು.ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿತ್ತು.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಸೋಲಿಲ್ಲದ ಸರದಾರನಂತೆ ಅದ್ಭುತ ಆಟ ಪ್ರದರ್ಶಿಸಿತು. ಒಂದರ ಹಿಂದೆ ಒಂದರಂತೆ ಪಂದ್ಯ ಗೆದ್ದು ಟ್ರೋಫಿ ಗೆಲ್ಲುವುದು ವಿಶೇಷವಾಗಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ 58 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿ ಗೌರವಿಸಲು ಬಿಸಿಸಿಐ ಮುಂದಾಗಿದೆ.