ಬೆಳಗಾವಿ : ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಂದು ಬಲಿ...!

ರಾಯಬಾಗ ಪೊಲೀಸ್‌ ಠಾಣೆ
ರಾಯಬಾಗ ಪೊಲೀಸ್‌ ಠಾಣೆ
ಬೆಳಗಾವಿ

ಬೆಳಗಾವಿ:

ಸುಗ್ರೀವಾಜ್ಞೆ ನಂತರವು ನಿಲ್ಲದ ಮೈಕ್ರೋ ಫೈನಾನ್ಸ್‌ ಕಿರುಕುಳ, ಫೈನಾನ್ಸ್‌ ನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್‌ ಬಳಿ ನಡೆದಿದೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ತಂದಿದ್ದು, ಈ ಮಧ್ಯೆಯೂ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸಾವನ್ನಪ್ಪುವುದು ಮುಂದುವರೆದಿದೆ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಯಬಾಗದಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆರಾಯಬಾಗ ತಾಲೂಕಿನ ಬಸವರಾಜ ಹಟ್ಟಿ ಎಂಬುವರು ನಾಲ್ಕು ಮೈಕ್ರೋ ಫೈನಾನ್ಸ್‌ ಗಳಲ್ಲಿ ಸುಮಾರು ಎರಡುವರೆ ಲಕ್ಷ ಸಾಲ ಪಡೆದಿದ್ದರು. ಆದರೆ ವಾರದ ಹಾಗೂ ತಿಂಗಳಿನ ಸಾಲದ ಕಂತನ್ನು ಕಟ್ಟಲು ಆಗದೇ ಈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.   

ಮೃತ ವ್ಯಕ್ತಿಗೆ ಇಬ್ಬರು ಮಕ್ಕಳಿದ್ದು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ರಾಯಬಾಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದರೆ ಈ ಘಟನೆ ಬಗ್ಗೆ ಇಲ್ಲಿಯವರೆಗೂ ಫೈನಾನ್ಸ್‌ ನವರ ವಿರುದ್ದ ಯಾವುದೇ ಕೇಸ್‌ ದಾಖಲಾಗಿಲ್ಲ.

Author:

...
Editor

ManyaSoft Admin

Ads in Post
share
No Reviews