ಬೆಳಗಾವಿ:
ಸುಗ್ರೀವಾಜ್ಞೆ ಜಾರಿಗೆ ಬಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಜನತಾ ಕಾಲೋನಿಯ ವ್ಯಕ್ತಿಯೋರ್ವ ಕ್ರಿಮಿನಾಶಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನನ್ನು ಗೋವಿಂದ ಗಣಪತಿ ವಡ್ಡರ್ (34) ಎಂದು ಗುರುತಿಸಲಾಗಿದ್ದು, ಗೋವಿಂದ ವಡ್ಡರ್ ಅವರು ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳ ಖರೀದಿಗೆ ಫೈನಾನ್ಸ್ ನಿಂದ ರೂ. 60 ಸಾವಿರ ಹಾಗೂ ಕುಟುಂಬದವರ ಹೆಸರಿನಲ್ಲಿ ಗ್ರಾಮಾಭಿವೃದ್ದಿ ಸಂಘದಿಂದ ರೂ. 1 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸಾವಿನ ಬೆನ್ನಲ್ಲೇ ಗ್ರಾಮಸ್ಥರು ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.