ಬೆಳಗಾವಿ: ಭೀಕರ ಅಪಘಾತ | ಬೈಕ್ ಗೆ ಕಾರು ಡಿಕ್ಕಿಯಾಗಿ ತಂದೆ ಮಗಳ ಸಾವು..!

ಬೆಳಗಾವಿ:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಬೈಕ್‌ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ರಾಮು ಕರ್ಣಿ (28) ಹಾಗೂ ಮಗಳು ಜಾಹ್ನವಿ ಕರ್ಣಿ (11 ) ಎಂದು ತಿಳಿದುಬಂದಿದೆ. ಇನ್ನು ಅಪಘಾತದಲ್ಲಿ ಮೃತನ ಪತ್ನಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮದುವೆ ಸಮಾರಂಭ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮೃತರು ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಕಾರು ಚಾಲಕ ಪರಾರಿಯಾಗಿದ್ದಾನೆ, ಅಪಘಾತದ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Author:

share
No Reviews