ಬೆಳಗಾವಿ : ಅಪ್ರಾಪ್ತ ಬಾಲಕಿಯ ಮೇಲೆ 6 ಮಂದಿ ಕಾಮುಕರು ಸೇರಿ ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಹೊರವಲಯದ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 2 ಬಾರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ, ಬಾಲಕಿಯನ್ನು ಆಕೆಯ ಸ್ನೇಹಿತನೋರ್ವ ನಂಬಿಸಿ ಗುಡ್ಡದ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಸಾಮೂಹಿಕ ಅತ್ಯಾಚಾರ ಎಸಗಿದ್ದು, ಅಲ್ಲದೇ, ಅದನ್ನು ಆರೋಪಿಗಳು ಮೊಬೈಲ್ ನಲ್ಲಿ ವಿಡಿಯೋ ಮಾಡಿ, ಆ ವಿಡಿಯೋವನ್ನು ಬಳಸಿಕೊಂಡು ಬಾಲಕಿಗೆ ಬೆದರಿಕೆ ಹಾಕಿ ಮತ್ತೊಮ್ಮೆ ಅತ್ಯಾಚಾರ ಎಸಗಿದ್ದಾರೆ.
ಇತ್ತೀಚೆಗೆ ಅರೋಪಿಗಳು ಮತ್ತೇ ಬಾಲಕಿಯನ್ನು ವಿಡಿಯೋ ಇಟ್ಟುಕೊಂಡು ಬೆದರಿಸುತ್ತಿರುವ ಹಿನ್ನೆಲೆ, ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೋಷಕರು ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಪ್ರಕರಣ ದಾಖಲಾದ ಒಂದೇ ದಿನದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.