ಬೆಳ್ತಂಗಡಿ : ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕ ಸಾವು..!

ಮೃತ ಬಾಲಕ ಪವನ್‌ (16)
ಮೃತ ಬಾಲಕ ಪವನ್‌ (16)
ದಕ್ಷಿಣ ಕನ್ನಡ

ಬೆಳ್ತಂಗಡಿ:

ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನೊರ್ವ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಆರಂಪೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್‌ (16) ಮೃತ ಬಾಲಕನಾಗಿದ್ದಾನೆ. ಮೃತ ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿ ಮನೆ ವಾಸವಿದ್ದು, ಸಿದ್ದಕಟ್ಟೆ ಗ್ರಾಮದ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಫಲ್ಗುಣಿ ನದಿ ಹತ್ತಿರ ಇದ್ದಾಗ ಪವನ್ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದು ಬಾಲಕ ಮೃತಪಟ್ಟಿದ್ದಾನೆ.

ದುರಾದೃಷ್ಟವಶಾತ್‌ ಅಜ್ಜಿ ಮನೆಗೆಂದು ಬಂದವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Author:

...
Editor

ManyaSoft Admin

share
No Reviews