HEALTH TIPS: ಬಾಳೆಹಣ್ಣು ತಿನ್ನೋದರಿಂದ ದೇಹಕ್ಕಾಗೋ ಪ್ರಯೋಜನಗಳು

HEALTH TIPS: 

*ಬಾಳೆಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ 3 ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಫೈಬರ್​ಗಳಿವೆ. ಹೀಗಾಗಿ ಊಟ ಮಾಡಿದ ತಕ್ಷಣ ಕೆಲವರು ಬಾಳೆಹಣ್ಣು ತಿನ್ನುತ್ತಾರೆ. ಇದರಿಂದ ತಿಂದ ಆಹಾರ ಚೆನ್ನಾಗಿ ಜೀರ್ಣವಾಗಿ ದೇಹಕ್ಕೆ ಪೌಷ್ಟಿಕಾಂಶಗಳನ್ನು ಒದಗಿಸುತ್ತದೆ.

*ಕ್ರೀಡಾಪಟುಗಳು ಮಾತ್ರ ಬಾಳೆಹಣ್ಣುಗಳನ್ನು ತಿನ್ನಲೇಬೇಕು. ಏಕೆಂದರೆ ಇದರಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಅಂಶಗಳು ಇರುವುದರಿಂದ ನಿಮಗೆ ಅತೀ ಬೇಗ ಪುಷ್ಠಿ ಹಾಗೂ ಚೈತನ್ಯವನ್ನು ನೀಡಿ ಕ್ರಿಡೇಯಲ್ಲಿ ಗೆಲುವು ಸಾಧಿಸಲು ಸಹಾಯಕವಾಗುತ್ತದೆ. 

*ನಿಮ್ಮ ದೈನಂದಿನ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿದರೆ, ನೀವು ಉತ್ತಮ ಆರೋಗ್ಯ ಫಲಿತಾಂಶಗಳನ್ನು ಕಾಣಬಹುದು. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 ಇದೆ. ನೀವು ಅಧಿಕ ತೂಕ ಹೊಂದಿದ್ದರೆ, ಬಾಳೆಹಣ್ಣುಗಳು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

*ರಕ್ತದೊತ್ತಡದಲ್ಲಿನ ಏರುಪೇರುಗಳಿಂದ ನೀವು ತೊಂದರೆಗೊಳಗಾಗಿದ್ದರೆ ಅಥವಾ ನೀವು ಬೇಗನೆ ಸುಸ್ತಾಗಲು ಪ್ರಾರಂಭಿಸಿದರೆ ಬಾಳೆಹಣ್ಣು ಸೇವಿಸಬೇಕು. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಂ ಅಂಶ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುವುದರಿಂದ ಇದು ದೇಹದೊಳಗೆ ರಕ್ತಪರಿಚಲನೆಯನ್ನು ಸುಧಾರಿಸಲು ಸಹಕಾರಿಯಾಗಿದೆ.

*ನೀವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರೆ ಆ ಸಮಸ್ಯೆಗೆ ಬಾಳೆಹಣ್ಣು ತುಂಬಾ ಪ್ರಯೋಜನಕಾರಿಯಾಗಿದೆ. ಇದು ನಿಮ್ಮ ಚರ್ಮದ ಸಮಸ್ಯೆಯನ್ನು ಹೋಗಲಾಡಿಸಬಹುದು. ಬಾಳೆಹಣ್ಣು ತಿಂದರೆ ಮುಖ ಕಾಂತಿಯುತವಾಗುತ್ತದೆ ಮತ್ತು ಚರ್ಮ ಕಾಂತಿಯುತವಾಗುತ್ತದೆ.

 

Author:

...
Keerthana J

Copy Editor

prajashakthi tv

share
No Reviews