HEALTH TIPS: ದಿನಕ್ಕೆರಡು ಬೇವಿನ ಎಲೆಗಳನ್ನು ತಿನ್ನುವುದರಿಂದ ಆಗುವ ಉಪಯೋಗಗಳು

HEALTH TIPS: 

ಬೇವಿನ ಎಲೆ ಉತ್ಕರ್ಷಣ ನಿರೋಧಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಪ್ರತಿದಿನ ಎರಡು ಅಥವಾ ಮೂರು ಬೇವಿನ ಎಲೆಗಳನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ.

*ಬೇವಿನ ಎಲೆಗಳನ್ನು ತಿನ್ನುವುದರಿಂದ ರಕ್ತವನ್ನು ಸ್ವಚ್ಛವಾಗಿರಿಸುತ್ತದೆ.

*ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.

*ಬೇವಿನ ಎಲೆ ರಕ್ತದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡದ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಬೇವಿನ ಎಲೆ ತುಂಬಾ ಪ್ರಯೋಜನಕಾರಿಯಾಗಿದೆ.

*ಬೇವು ಹಲ್ಲುಗಳ ಮತ್ತು ವಸಡಿನ ಆರೋಗ್ಯ ಕಾಪಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಬಾಯಿಯ ದುರ್ವಾಸನೆ, ವಸಡಿನಿಂದ ರಕ್ತ ಸೋರಿಕೆ ಮತ್ತು ಇನ್ನಿತರ ಸೋಂಕುಗಳನ್ನು ನಿವಾರಣೆ ಮಾಡುತ್ತದೆ.

*ಬೇವಿನ ಎಲೆಗಳು ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ವಿರೋಧಿ, ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿವೆ. ಈ ಎಲ್ಲಾ ಗುಣಲಕ್ಷಣಗಳು ಶ್ವಾಸಕೋಶದ ಉರಿಯೂತದ ವಿರುದ್ಧ ಹೋರಾಡಲು ಸಹಾಯಕವಾಗಿವೆ.

 

Author:

...
Keerthana J

Copy Editor

prajashakthi tv

share
No Reviews