ಬೆಂಗಳೂರು : ಬೆಂಗಳೂರು ನಗರದಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಘಟನೆ ವರದಿಯಾಗಿದೆ. ವಾಣಿ ವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿಗೆ ಕೋವಿಡ್ ಸೋಂಕು ತಗುಲಿರುವ ವರದಿ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ವಾಣಿವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಮಗುವಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಗುವಿಗೆ ಕೋವಿಡ್ ಸೋಂಕು ಪತ್ತೆಯಾದ ಬೆನ್ನಲ್ಲೇ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಕ್ಷಣವೇ ಕೋವಿಡ್ ಮಾನಿಟರಿಂಗ್ ಮಾಡಲು ಸೂಚನೆ ನೀಡಿದ್ದಾರೆ. "ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ, ಈ ಬಗ್ಗೆ ಕೇಂದ್ರದಿಂದ ಯಾವುದೇ ಗೈಡ್ ಲೈನ್ಸ್ ಬಂದಿಲ್ಲ. ಜನ ಆತಂಕಪಡುವ ಅಗತ್ಯ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ
ಈ ಘಟನೆ, ಕೋವಿಡ್ ಸೋಂಕು ಮಕ್ಕಳಲ್ಲಿ ಕೂಡ ಕಾಣಿಸಿಕೊಳ್ಳಬಹುದಾಗಿದೆ ಎಂಬುದನ್ನು ತೋರಿಸುತ್ತದೆ. ಆದಾಗ್ಯೂ, ಆರೋಗ್ಯ ಸಚಿವರ ಹೇಳಿಕೆಯಿಂದ, ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೇಶಾದ್ಯಂತ ಒಟ್ಟು 257 ಸಕ್ರಿಯ ಪ್ರರಕಣಗಳಿದ್ದು, ಕೇರಳದಲ್ಲಿ 186 ಕೇಸ್, 95 ಸಕ್ರಿಯ ಪ್ರಕರಣಗಳಿವೆ. ಕರ್ನಾಟಕದಲ್ಲಿ 33 ಕೇಸ್ ದಾಖಲಾಗಿದ್ದು, 16 ಸಕ್ರಿಯ ಪ್ರಕರಣಗಳಿವೆ. ಆಂದ್ರಪ್ರದೇಶದಲ್ಲಿ 19 ಪಾಸಿಟಿವ್ ಕೇಸ್ ದಾಖಲಾಗಿದ್ದು, ಗುಜರಾತ್‍ನಲ್ಲಿ 15 ಕೇಸ್ ದಾಖಲಾಗಿವೆ. ಹೀಗಾಗಿ ಸಭೆ ಸಮಾರಂಭಗಳಲ್ಲಿ ಮಾಸ್ಕ್ ಹಾಕಿಕೊಳ್ಳಲು ಸಲಹೆ ನೀಡಿದ್ದು, ರೋಗ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸಲು ಸಲಹೆ ನೀಡಲಾಗಿದೆ.