ಬೆಂಗಳೂರು : ಬೆಂಗಳೂರು ನಗರದ ವೈಟ್ಫೀಲ್ಡ್ ಮೂಲದ 84 ವರ್ಷದ ವೃದ್ಧನೋರ್ವ ಕೋವಿಡ್-19 ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ನಗರದಲ್ಲಿ ಕೊರೋನಾ ವೈರಸ್ಗೆ ಸಂಬಂಧಿಸಿದಂತೆ ಇದು ಮೊದಲ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
ಇನ್ನು ಮೃತಪಟ್ಟ ವೃದ್ದ ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಖಾಯಿಲೆಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದು. ಇತ್ತೀಚೆಗೆ ಅವರಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ.
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38 ಇದ್ದು, ಬೆಂಗಳೂರು ಒಂದರಲ್ಲೇ 32 ಕೇಸ್ಗಳು ದಾಖಲಾಗಿವೆ.