ಬೆಂಗಳೂರು : ಮೂರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನೆಲೆ ಇಂದು ಸಿಲ್ಕ್ ಬೋರ್ಡ್ ಪ್ರದೇಶದಲ್ಲಿ ಮಳೆ ಹಾನಿಗೊಳಗಾದ ಸ್ಥಳಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ ಚಲವಾದಿ ನಾರಾಯಣಸ್ವಾಮಿ ಹಾಗೂ ಹಲವು ಗಣ್ಯರು ಭೇಟಿ ನೀಡಿ ವಸ್ತುಪರಿಸ್ಥಿತಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ನಾಯಕರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದರೂ ಯಾವುದೇ ಮೂಲಭೂತ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ, ಇನ್ನುಳಿದಂತೆ ಭ್ರಷ್ಟಾಚಾರ, ಹಗರಣ ಮತ್ತು ಬೆಲೆಯ ಏರಿಕೆಯಲ್ಲಿಯೇ ಸರ್ಕಾರದ "ಸಾಧನೆ" ಸೀಮಿತವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಗಂಭೀರ ವಾಗ್ದಾಳಿ ನಡೆಸಿದರು. ಅಲ್ಲದೇ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು "ಬ್ಯಾಡ್ ಬೆಂಗಳೂರು" ಎಂಬ ಪೋಸ್ಟರ್ಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ನಾರದಾ ಕಬಾಡಿ, ಶಾಸಕರಾದ ಶ್ರೀ ಎಂ. ಎಸ್. ರಾಮಮೂರ್ತಿ, ಶ್ರೀ ಸಿ. ಕೆ. ರಾಮಮೂರ್ತಿ, ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.