ಬೆಂಗಳೂರು : ಅಧಿಕಾರಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡುವಂತೆ ಸಿಎಂ ಸೂಚನೆ..!

ಬೆಂಗಳೂರು : ರಾಜ್ಯದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ತಕ್ಷಣ ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಲು ಹಾಗೂ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಅಲ್ದೇ ಈ ಬಗ್ಗೆ ಸಮಗ್ರ ಅವಲೋಕಿಸಲು ಮೇ 30 ಮತ್ತು 31 ರಂದು ಡಿಸಿ, ಸಿಇಒ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಿಳಿಸದ್ದಾರೆ. ಏರ್ಪಡಿಸಲಾಗಿದ್ದು,

ಪ್ರಸ್ತುತ ಪರಿಸ್ಥಿತಿಯಲ್ಲಿ ಸರ್ಕಾರದ ತೆಗೆದುಕೊಂಡಿರುವ ಕ್ರಮಗಳು:

  • ರಾಜ್ಯದ 170 ತಾಲ್ಲೂಕುಗಳನ್ನು ಪ್ರವಾಹ ಅಥವಾ ಭೂಕುಸಿತಕ್ಕೆ ಗುರಿಯಾಗಬಹುದಾದ ಪ್ರದೇಶಗಳೆಂದು ಗುರುತಿಸಲಾಗಿದೆ. ಮುಂಜಾಗ್ರತೆಯಾಗಿ 2,296 ಕಾಳಜಿ ಮತ್ತು ಆಶ್ರಯ ತಾಣಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಸಜ್ಜುಗೊಳಿಸಲಾಗುತ್ತಿದೆ.
  • ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿ.ಬಿ.ಎಂ.ಪಿ) ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ.
  • ಮೇ 26, 2025 ರ ವರೆಗೆ 45 ಮನೆಗಳು ಸಂಪೂರ್ಣವಾಗಿ ಮತ್ತು 1,385 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಹಾನಿಗೊಳಗಾದ ಮನೆಗಳಿಗೆ ಶೇ.99% ಆರ್ಥಿಕ ಸಹಾಯಧನ ಪಾವತಿಸಲಾಗಿದೆ.
  • ವಿಪತ್ತು ನಿರ್ವಹಣೆಗಾಗಿ ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಗಳಲ್ಲಿ ರೂ.973 ಕೋಟಿ ಅನುದಾನವಿರುತ್ತದೆ.

"ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಭಾಯಿಸುವಲ್ಲಿ ಯಾವುದೇ ವಿಲಂಬ ಆಗಬಾರದು. ತಕ್ಷಣದ ಪರಿಹಾರ ಕ್ರಮಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಬೇಕು," ಎಂದು ತಿಳಿಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews