ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣ | ಮಹಾರಾಷ್ಟ್ರ ಸಾರಿಗೆ ಇಲಾಖೆ ಕಾರ್ಯದರ್ಶಿ ಜೊತೆ ಮಾತನಾಡಲು ಸೂಚನೆ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು ನಗರ

ಬೆಂಗಳೂರು:

ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮೇಲೆ ದಾಳಿ ನಡೆಸಿದ ಘಟನೆಗಳ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕುರಿತು ಮಹಾರಾಷ್ಟ್ರದ ತಮ್ಮ ಸಹೋದ್ಯೋಗಿಯೊಂದಿಗೆ ಮಾತನಾಡಲು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ಇಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕದಲ್ಲಿ ವಾಸಿಸುವವರು ಕನ್ನಡ ಕಲಿಯಬೇಕು. ಜನರು ತಮ್ಮ ಮಾತೃಭಾಷೆಯಾದ ಮರಾಠಿಯನ್ನು ಮಾತನಾಡಬಹುದಾದರೂ, ಕರ್ನಾಟಕದಲ್ಲಿ ಕನ್ನಡವನ್ನೂ ಮಾತನಾಡಬೇಕು. ಇಂತಹ ಘಟನೆಗಳನ್ನು ಎಲ್ಲ ಪಕ್ಷಗಳು ಖಂಡಿಸಬೇಕು' ಎಂದರು.

ನಮ್ಮ ಇಲಾಖೆಯ ಕಾರ್ಯದರ್ಶಿಗೆ ಮಹಾರಾಷ್ಟ್ರದಲ್ಲಿರುವ ಅವರ ಸಹವರ್ತಿಯೊಂದಿಗೆ ಮಾತನಾಡಲು ಸೂಚಿಸಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಪ್ರತಿನಿತ್ಯ ಸಾವಿರಾರು ಜನರು ಸಂಚರಿಸುತ್ತಿದ್ದು, ಇಂತಹ ಘಟನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ' ಎಂದು ಸಾರಿಗೆ ಸಚಿವರು ಹೇಳಿದ್ದಾರೆ. ಸಂಬಂಧ ದೂರು ದಾಖಲಿಸಲಾಗಿದೆ ಮತ್ತು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದಾದ ಒಂದು ದಿನದ ನಂತರ, ಕಂಡಕ್ಟರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ ಎಂದರು.

Author:

...
Editor

ManyaSoft Admin

share
No Reviews