ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಡ್ಯಾನ್ಸ್ ಮಾಸ್ಟರ್ ಬಂಧನ

ಬೆಂಗಳೂರು : ಬೆಂಗಳೂರು ನಗರದ ಕಾಡುಗೋಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಡ್ಯಾನ್ಸ್‌ ಕ್ಲಾಸ್‌ ಬಗ್ಗೆ ಮಾಹಿತಿ ಕೊಡೋದಾಗಿ ಹೇಳಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಭಾರತಿ ಕಣ್ಣನ್‌ (28) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಪ್ರಾಪ್ತ ಬಾಲಕಿ ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದ ವೇಳೆ, ಆರೋಪಿಯು ತನ್ನ ಕಾರ್ ನಿಲ್ಲಿಸಿ "ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾತಾಡಬೇಕಿದೆ" ಎಂದು ತಿಳಿಸಿ ಆಕೆಯನ್ನು ಕಾರಿಗೆ ಹತ್ತಿಸಿಕೊಂಡಿದ್ದಾನೆ. ಬಳಿಕ ಕಾರನ್ನು ಲಾಕ್ ಮಾಡಿ, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕೃತ್ಯದ ಬಳಿಕ ಬಾಲಕಿಯನ್ನು ಮತ್ತೆ ವಾಪಸ್‌ ಅದೇ ಸ್ಥಳದಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ.

ಬಾಲಕಿ ತಕ್ಷಣವೇ ಈ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದು, ಕೂಡಲೇ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ಪಾಕ್ಸೋ (POCSO) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ತನಿಖೆ ಮುಂದುವರೆದಿದ್ದು, ಆರೋಪಿಗೆ ಜಾಮೀನು ಸಿಗದಂತೆ ಕ್ರಮ ಕೈಗೊಳ್ಳಲಾಗಿದೆ.

Author:

...
Sushmitha N

Copy Editor

prajashakthi tv

share
No Reviews