ಬೆಂಗಳೂರು : ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ | ನಾಲ್ಕು ಬೈಕ್‌ಗಳು ಸಂಪೂರ್ಣ ಸುಟ್ಟು ಭಸ್ಮ

ಬೆಂಗಳೂರು : ಬೆಂಗಳೂರು ನಗರದ ಟಿ.ದಾಸರಹಳ್ಳಿಯಲ್ಲಿ ಇರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ  ಬೆಂಕಿ ಕಾಣಿಸಿಕೊಂಡು, ಬೆಂಕಿಯ ಕೆನಾಲಗೆಗೆ ಸ್ಥಳದಲ್ಲೇ ನಾಲ್ಕು ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಮನೀಷ್‌ ಎಂಬುವವರಿಗೆ ಸೇರಿದ ಶೋರೂಂನಲ್ಲಿ ಈ ಅವಘಢ ಸಂಭವಿಸಿದೆ. ರಾತ್ರಿ ಶೋರೂಂ ಮುಚ್ಚಿ ಮನೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನು ಶೋರೂಂನೊಳಗಿನ ಎಲೆಕ್ಟ್ರಿಕ್ ಬೈಕ್‌ಗಳಲ್ಲಿನ ಬ್ಯಾಟರಿಗಳಲ್ಲಿ ಸ್ಫೋಟವಾಗಿದ್ದು, ಅದರಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಅದೃಷ್ಠವಶಾತ್‌ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಸ್ಥಳೀಯರು ಬೆಂಕಿ ಕಾಣಿಸಿಕೊಂಡ ತಕ್ಷಣ ಪೀಣ್ಯಾ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿಗೆ ನಿಖರ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ತನಿಖೆ ಮುಂದುವರೆದಿದೆ.

 

 

Author:

...
Sushmitha N

Copy Editor

prajashakthi tv

share
No Reviews