ಬೆಂಗಳೂರು :
ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದವರಿಗೆ ಗಾಯವಾಗಿದ್ದು, ಸ್ಪೋಟದ ರಭಸಕ್ಕೆ ಇಡೀ ಮನೆಯ ಗೋಡೆ ಬಿರುಕು ಬಿಟ್ಟಿರುವಂತಹ ಘಟನೆ ಬೆಂಗಳೂರು ನಗರದ ಮಹದೇವಪುರದ ನಾಗಪ್ಪ ರೆಡ್ಡಿ ಬ್ಲಾಕ್ ನಲ್ಲಿ ನಡೆದಿದೆ.
ಬೆಳಿಗ್ಗೆ ನೀರು ಕಾಯಿಸಲು ಗ್ಯಾಸ್ ಆನ್ ಮಾಡಿದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ 6 ಮಂದಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಸ್ಪೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರ ಛಿದ್ರವಾಗಿದ್ದು, ಮನೆಯ ಗೋಡೆ ಬಿರುಕು ಬಿಟ್ಟಿದ್ದು ಮನೆಯಲ್ಲಿದ್ದ ಕೆಲ ವಸ್ತುಗಳು ನಾಶವಾಗಿದೆ, ಅಲ್ಲದೇ ಕಾರಿನ ಗಾಜು ಸಹ ಹೊಡೆದೋಗಿದೆ. ಇನ್ನು ರಾತ್ರಿ ಗ್ಯಾಸ್ ಸೋರಿಕೆಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.