ಬೆಂಗಳೂರು :
ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿ ರಂಗನ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ 9 ವರ್ಷಕ್ಕೂ ಹೆಚ್ಚು ಕಾರ್ಯನಿರ್ವಹಿಸಿದ್ದರು.
ಕಸ್ತೂರಿ ರಂಗನ್ ಅವರಿಗೆ ಪದ್ಮವಿಭೂಷಣ, ಪದ್ಮಭೂಷಣ , ಪದ್ಮಶ್ರೀ ಪ್ರಶಸ್ತಿಗಳು ದೊರೆತಿವೆ. ಅಲ್ದೇ ಇವರು ಭಾರತೀಯ ಸಂಶೋಧನಾ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದರು. ಕೆ. ಕಸ್ತೂರಿರಂಗನ್ ಅವರು ವಿಶ್ವಸಂಸ್ಥೆಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಕೇಂದ್ರದ ಆಡಳಿತ ಮಂಡಳಿ, ಐಐಟಿ ಚೆನ್ನೈನ ಆಡಳಿತ ಮಂಡಳಿ, ರಾಮನ್ ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಮತ್ತು ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯದ ಸಂಶೋಧನಾ ಮಂಡಳಿಯ ಅಧ್ಯಕ್ಷರಾಗಿದ್ದರು. ಇನ್ನು ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ವ್ಯವಸ್ಥೆ ಕಲ್ಪಿಸಲಾಗಿದೆ.