ಬೆಂಗಳೂರು:
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಪೋರಂ ಮಾಲ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
37 ವರ್ಷದ ಬಸವರಾಜು ಎಂಬಾತ ಕೊಲೆಯಾದ ದುರ್ದೈವಿಯಾಗಿದ್ದಾರೆ. ಕೊಲೆಯಾದ ಬಸವರಾಜು ಮತ್ತು ಆರೋಪಿ ಮಾಯಪ್ಪ ಇಬ್ಬರು ಪೋರಂ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದರೂ ಎನ್ನಲಾಗಿದೆ. ಕಸ ಎತ್ತುವ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಜಗಳ ವಿಕೋಪಕ್ಕೆ ಹೋಗಿ ಆರೋಪಿ ಮಾಯಪ್ಪ ಬಸವರಾಜುವಿಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.
ಈ ಘಟನೆ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.