ಬೆಂಗಳೂರು: ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು..!

ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು ನಗರ

ಬೆಂಗಳೂರು:

ಬೆಳಗಾವಿಯಲ್ಲಿ ನಡೆದ ಕೆಎಸ್‌ ಆರ್‌ ಟಿಸಿ ಬಸ್‌ ಕಂಡಕ್ಟರ್‌ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್‌ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್‌ 22 ರಂದು ಅಖಂಡ ಕರ್ನಾಟಕ ಬಂದ್‌ ಮಾಡುವುದಾಗಿ ಕರೆ ನೀಡಿದ್ದಾರೆ.

ಕನ್ನಡಪರ ಹೋರಾಟಗಾರರು ರಾಜ್ಯದಲ್ಲಿ ನಡೆಯುತ್ತಿರುವ ಮರಾಠಿಗರ ದೌರ್ಜನ್ಯಕ್ಕೆ ಖಡಕ್ಆಗಿ ಖಡಿವಾಣ ಹಾಕಲು ಪ್ರತಿಭಟನೆ ಮಾಡುವ ಮೂಲಕ ಮುಂದಾಗಿದ್ದಾರೆ, ಇದರ ಜೊತೆಗೆ ಮಾ. 7ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದೆ, ಹಾಗೂ ಮಾರ್ಚ್‌ 11 ರಂದು ಮೇಕೆದಾಟು ಯೋಜನೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್‌ ಮಾಡಲು ಮತ್ತು ಮಾ. 14ರಂದು ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಮತ್ತು ಮಾ.17ರಂದು ಹೊಸಕೋಟೆಚೆನ್ನೈ ಹೆದ್ದಾರಿ ಬಂದ್ ಮಾಡಲು ಇಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಸಭೆಯಲ್ಲಿ ಸಾರಾ ಗೋವಿಂದು, ಕರವೇ ಪ್ರವೀಣ್ ಶೆಟ್ಟಿ, ಕನ್ನಡ ಕುಮಾರ್, ಜಯ ಕರ್ನಾಟಕ ರಾಜ್ಯಾಧ್ಯಕ್ಷ ಜಗದೀಶ್, ಗಿರೀಶ್ ಗೌಡ, ರೂಪೇಶ್ ರಾಜಣ್ಣ ಸೇರಿದಂತೆ ಮುಂತಾದ ಕನ್ನಡಪರ ಹೋರಾಟಗಾರರು ಭಾಗವಹಿಸಿದ್ದರು.

Author:

...
Editor

ManyaSoft Admin

Ads in Post
share
No Reviews