ಬೆಂಗಳೂರು :
ಪಹಲ್ಗಾಮ್ ನಲ್ಲಿ ಭಾರತೀಯರ ಮೇಲೆ ಪಾಕಿಸ್ತಾನಿ ಉಗ್ರರು ನಡೆಸಿದ್ದ ದಾಳಿಗೆ ಇಂದು ನಸುಕಿನ ಜಾವ ಪಾಕಿಸ್ತಾನದ ವಿರುದ್ದ ಭಾರತ ಆಪರೇಷನ್ ಸಿಂಧೂರ ಮೂಲಕ ಪ್ರತೀಕಾರವನ್ನು ತೀರಿಸಿಕೊಂಡಿದೆ. ಇದರಿಂದಾಗಿ ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ಹೋಗುವ ವಿಮಾನಗಳನ್ನು ರದ್ದು ಮಾಡಲಾಗಿದೆ.
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡುವ ಮೂಲಕ ಉಗ್ರರ ಮೇಲಿನ ಪ್ರತೀಕಾರವನ್ನು ತೀರಿಸಿಕೊಂಡಿದೆ. ಇದರಿಂದಾಗಿ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನ, ಜೋಧಪುರ್, ಯುಪಿಯ ಅಯೋಧ್ಯೆ, ಲಖನೌ ಹಾಗೂ ಘಾಜಿಯಾಬಾದ್ ಗೆ ತೆರಳಬೇಕಿದ್ದ ವಿಮಾನಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಇದರ ಬಗ್ಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಟ್ವೀಟ್ ಮಾಡಿದ್ದು, ಕೆಲವು ಪ್ರದೇಶಗಳಿಗೆ ವಿಮಾನ ಹಾರಾಟಕ್ಕೆ ನಿರ್ಬಂಧ ಏರಲಾಗಿದೆ. ಇದರಿಂದಾಗಿ ಪ್ರಯಾಣಿಕರು ತಮ್ಮ ವಿಮಾನಗಳ ವೇಳಾಪಟ್ಟಿಯಲ್ಲಿನ ಬದಲಾವಣೆಗಳನ್ನು ಆಯಾ ವಿಮಾನಯಾನ ಸಂಸ್ಥೆಗಳ ಅಧಿಕೃತ ಟ್ವಿಟರ್ ಖಾತೆಗಳ ಮೂಲಕ ಪಡೆಯಬಹದು ಎಂದು ತಿಳಿಸಿದೆ.