ಬೆಂಗಳೂರು : ಸುಪ್ರಿಂಕೋರ್ಟ್ ಆದೇಶದಂತೆ ಬೆಂಗಳೂರಿಗರಿಗೆ ಇನ್ಮುಂದೆ ಓಸಿ ಸರ್ಟಿಫಿಕೆಟ್ ಕಡ್ಡಾಯ.

ಬೆಂಗಳೂರು : ಸಿಲಿಕಾನ್‌ ಸಿಟಿ ಮತ್ತು ಗಾರ್ಡನ್‌ ಸಿಟಿ ಎಂದು ಕರೆಯಲ್ಪಡುವ ಕರ್ನಾಟಕದ ರಾಜ್ಯದ ರಾಜಧಾನಿ, ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲಿ ಇಂದಿನಿಂದ ಗ್ರೇಟರ್‌ ಅಥಾರಿಟಿ ಜಾರಿಗೆ ಬಂದಿದೆ. ಸುಪ್ರಿಂಕೋರ್ಟ್ ಆದೇಶದಂತೆ ಓಸಿ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಬೆಂಗಳೂರಿನಲ್ಲಿ ಇನ್ಮುಂದೆ ಮನೆ ಕಟ್ಟುವ ಮುಂಚೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಓಸಿ ಸರ್ಟಿಫಿಕೆಟ್​ ಪಡೆಯುವುದು ಕಡ್ಡಾಯವಾಗಿದೆ.

ಬೆಂಗಳೂರಿನಲ್ಲಿ ಹಲವಾರು ರೀತಿಯ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದೀಗ ಮನೆಗಳನ್ನು ಕಟ್ಟುವ ಮುಂಚೆ OC ಸರ್ಟಿಫಿಕೆಟ್‌ ಕಡ್ಡಾಯಗೊಳಿಸಲಾಗಿದೆ. ಸರ್ಟಿಫಿಕೆಟ್‌ ಇಲ್ಲದಿದ್ದರೆ ಆ ಬಳಿಕ ಮಾತ್ರ ವಿದ್ಯುತ್ ಮತ್ತು ನೀರಿನ ಸಂಪರ್ಕ ಸಿಗುತ್ತದೆ. ಎಂದು ಸುಪ್ರೀಂ ಕೋರ್ಟ್‌ ಆದೇಶವನ್ನು ಜಾರಿಗೊಳಿಸಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರಿಂದ ಆದೇಶವನ್ನು ಹೊರಡಿಸಲಾಗಿದೆ. ಬೆಂಗಳೂರಿನ ʼಎʼಖಾತೆ ಮತ್ತು ʼಬಿʼ ಖಾತೆಯ ನಿವೇಶನದಲ್ಲಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದಾಗಿ ವಿದ್ಯುತ್‌ ಸಂಪರ್ಕಕ್ಕಾಗಿ ಸುಮಾರು 66 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಇನ್ನು ಸುಪ್ರೀಂ ಕೋರ್ಟ್‌ ಆದೇಶದಂತೆ ಪ್ರಮಾಣ ಪತ್ರ ಪಡೆದಿರುವಂತವರಿಗೆ ಮಾತ್ರ ಅವರ ಕಟ್ಟಡಗಳಿಗೆ ವಿದ್ಯುತ್‌ ಮತ್ತು ನೀರು ಸರಬರಾಜು ಒಳಚಂರಡಿ ಸಂಪರ್ಕವನ್ನು ನೀಡುವಂತೆ ಆದೇಶವನ್ನು ನೀಡಿದೆ.

ಸ್ವಾಧೀನದ ಅನುಭವ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವ ವಿವರಗಳನ್ನು ಪಡೆಯಲು ಬಿಬಿಎಂಪಿ ಯಿಂದ ಎಸ್​​ಎಂಎಸ್​ ಮತ್ತು ದೂರವಾಣಿ ಕರೆ ಮುಖಾಂತರ ವಿದ್ಯುತ್ ಸಂಪರ್ಕಕ್ಕಾಗಿ ಬಾಕಿ ಇರುವ ಅರ್ಜಿದಾರರನ್ನು ಸಂಪರ್ಕಿಸಲಾಗುತ್ತದೆ. ಬಿಬಿಎಂಪಿ ಕೋರುವ ಮಾಹಿತಿಯನ್ನು ಒದಗಿಸಲು ಹಾಗೂ ಈ ಕೆಳಕಂಡ ಆನ್‌ಲೈನ್ ಲಿಂಕ್‌ನಲ್ಲಿ ನೊಂದಾಯಿತ ಎಂಜಿನಿಯರ್​ಗಳ ಮುಖಾಂತರ ಸ್ವಾಧೀನ ಅನುಭವ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವಂತೆ ಬೆಂಗಳೂರಿನ ನಾಗರೀಕರನ್ನು ಕೋರಲಾಗಿದೆ

 

Author:

...
Sushmitha N

Copy Editor

prajashakthi tv

share
No Reviews