ಬೀದರ್:‌ ಎಟಿಎಂ ದರೋಡೆ ಪ್ರಕರಣ | ಆರೋಪಿಗಳ ಮಾಹಿತಿ ನೀಡಿದರೆ ಸಿಗುತ್ತೆ 5 ಲಕ್ಷ ರೂ ಬಹುಮಾನ

 ಆರೋಪಿಗಳಾದ ಅಮನ್‌ ಕುಮಾರ್‌ ಹಾಗೂ ಅಲೋಕ್‌ ಕುಮಾರ್
ಆರೋಪಿಗಳಾದ ಅಮನ್‌ ಕುಮಾರ್‌ ಹಾಗೂ ಅಲೋಕ್‌ ಕುಮಾರ್
ಬೀದರ್‌

ಬೀದರ್:‌ 

ಬೀದರ್‌ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಹಾಡಹಾಗಲೇ ಎಟಿಎಂ ಹಣ ತುಂಬುವ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಸುಮಾರು 93 ಲಕ್ಷ ರೂ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಪ್ರಕಟಣೆ ಮೂಲಕ ಮಾಹಿತಿಯೊಂದನ್ನು ನೀಡಿದ್ದಾರೆ.

ಬೀದರ್‌ ನಲ್ಲಿ ಹಾಡಹಾಗಲೇ ಎಟಿಎಂ ಗೆ ಹಣ ತುಂಬಲು ಬಂದಿದ್ದ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ದರೋಡೆಕೋರರು ಗುಂಡಿನ ದಾಳಿ ನಡೆಸಿ ಸುಮಾರು 93 ಲಕ್ಷ ರೂ ದೋಚಿ ಪರಾರಿಯಾಗಿದ್ದರು, ಈ ದಾಳಿಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು, ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಪ್ರಕರಣದ ಇಬ್ಬರು ಆರೋಪಿಗಳು ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.

ಪೊಲೀಸರ ಮಾಹಿತಿ ಪ್ರಕಾರ ತಲೆಮರೆಸಿಕೊಂಡಿರುವ ಇಬ್ಬರೂ ಆರೋಪಿಗಳು ಬಿಹಾರ ರಾಜ್ಯದವರಾದ ಅಮನ್ ಕುಮಾರ್, ಅಲೋಕ್ ಕುಮಾರ್ ಕುರಿತು ಪೊಲೀಸರಿಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಹಾಗೂ ಉತ್ತರ ಪ್ರದೇಶದಲ್ಲಿ ದರೋಡೆ ಪ್ರಕರಣವೊಂದರಲ್ಲಿಯೂ ಪೊಲೀಸರಿಗೆ ಬೇಕಾಗಿದ್ದಾರೆ, ಆದ್ದರಿಂದ ಇಬ್ಬರ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಆರೋಪಿಗಳಿಬ್ಬರ ಪೋಟೊ ಹಾಕಿ, ಇಬ್ಬರ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ. ಹಾಗೂ ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿಡಲಾಗುತ್ತದೆ ಎಂದು ಹೇಳಿದ್ದಾರೆ.
 

Author:

share
No Reviews