ಕ್ರಿಕೆಟ್ : ಐಪಿಎಲ್ ಸೀಸನ್-18 ತನ್ನ ಅಂತಿಮ ಹಂತಕ್ಕೆ ಕಾಲಿಟ್ಟಿದ್ದು, ಪ್ಲೇಆಫ್ ಪ್ರವೇಶಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್‌ಗೆ ಎಂಟ್ರಿ ನೀಡಿದ್ದು, ಇನ್ನು ಒಂದು ಕೊನೆಯ ಸ್ಥಾನಕ್ಕಾಗಿ ಸಂಘರ್ಷ ಮುಂದಾಗಿದೆ.
ಇಂದು ಮುಂಬೈನ ವಾಂಖೆಡೆಯಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮ್ಯಾಚ್, ಪ್ಲೇಆಫ್ ಕನಸನ್ನು ಜೀವಂತವಾಗಿಟ್ಟುಕೊಳ್ಳಲು ಎರಡು ತಂಡಗಳಿಗೂ ‘ಡು ಆರ್ ಡೈ’ ಹೋರಾಟವಾಗಿದೆ. ಇನ್ನು ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಆಡಿರುವ 13 ಪಂದ್ಯಗಳಲ್ಲಿ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು 13 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.
ಇಂದಿನ ಪಂದ್ಯದಲ್ಲಿ ಮುಂಬೈ ಗೆದ್ದರೆ ನೇರವಾಗಿ 16 ಅಂಕಗಳೊಂದಿಗೆ ಪ್ಲೇಆಫ್ ಗೆ ಪ್ರವೇಶಿಸಲಿದೆ. ಇನ್ನು 5ನೇ ಸ್ಥಾನದಲ್ಲಿರೋ ಡೆಲ್ಲಿ ವಿರುದ್ಧ ಮುಂಬೈ ಗೆದ್ದರೆ, 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್‌ಗೆ ಎಂಟ್ರಿ ಕೊಡಲಿದೆ. ಅದೇ ಮುಂಬೈ ಇಂಡಿಯನ್ಸ್ ಸೋತರೆ, ಪಂಜಾಬ್ ಎದುರಿನ ಕೊನೆ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಲೀಗ್ ಮ್ಯಾಚ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಎದುರು ಸೋಲಬೇಕಾಗುತ್ತದೆ. ಆಗ ಮುಂಬೈ ಇಂಡಿಯನ್ಸ್ ಪ್ಲೇ ಆಫ್ಗೆ ಎಂಟ್ರಿ ಕೊಡಲಿದೆ.
ಮುಂಬೈ ಇಂಡಿಯನ್ಸ್ಗಿಂತ ಡೆಲ್ಲಿ ಕ್ಯಾಪಿಟಲ್ಸ್ಗೆ ಇವತ್ತು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಯಾಕೆಂದರೆ, 13 ಅಂಕ ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್, ಮುಂದಿನ ಎರಡು ಪಂದ್ಯಗಳನ್ನ ಗೆಲ್ಲಬೇಕಿದೆ. ಒಂದೇ ಒಂದು ಪಂದ್ಯ ಸೋತರು, 15 ಅಂಕಗಳಿಸಲಷ್ಟೇ ಶಕ್ತವಾಗಲಿದೆ. ಡೆಲ್ಲಿಗೆ ಪ್ಲೇ ಆಫ್ ಕನಸು ಜೀವಂತವಾಗಿರಬೇಕಾದ್ರೆ, ಮುಂಬೈ ಎದುರು ಇಂದು ಗೆಲ್ಲಬೇಕಿದೆ.