ಕೊರಟಗೆರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊರಟೆರೆಯಲ್ಲಿ ಬಿಜೆಪಿ ಪ್ರತಿಭಟನೆ

ಕೊರಟಗೆರೆ: 

ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇತ್ತ ಕೊರಟಗೆರೆ ಪಟ್ಟಣದ ಎಸ್‌ ಎಸ್‌ ಆರ್‌ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯ್ತು. ಈ ವೇಳೆ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ದರ್ಶನ್‌, ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ್‌ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಗುರುದತ್ತ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಂದ್ರ , ಮುಖಂಡರು, ಕಾರ್ಯಕರ್ತರು ಸೇರಿ ಹಲವರು ಭಾಗಿಯಾಗಿದರು. 

ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಅನಿಲ್‌ ಕುಮಾರ್‌ ಮಾತನಾಡಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದ್ರು ರಾಜ್ಯದಲ್ಲಿ ಅಭಿವೃದ್ದಿ ಕೆಲಸ ಮಾತ್ರ ಶೂನ್ಯ. ಅಭಿವೃದ್ದಿ ಯೋಜನೆಗಳನ್ನ ಪಕ್ಕಕ್ಕೆ ತಳ್ಳಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಸರ್ಕಾರ ಹೆಚ್ಚಿನ ಒತ್ತನ್ನು ನೀಡ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ನೀಡಲು ಅಗತ್ಯ ವಸ್ತುಗಳಾದ ಹಾಲಿನ ದರದಿಂದ ಹಿಡಿದು ಬಿಬಿಎಂಪಿ ವ್ಯಾಪ್ತಿಯ ಕಸಕ್ಕೂ ಕೂಡ ತೆರಿಗೆ ಕಟ್ಟುವಂತೆ ಆದೇಶ ಹೊರಡಿಸಿರೋ ಏಕೈಕ ಸರ್ಕಾರವೆಂದ್ರೆ ಕಾಂಗ್ರೆಸ್‌ ಸರ್ಕಾರ ಮಾತ್ರ ಎಂದು ಕಿಡಿಕಾರಿದರು.

ಕೊರಟಗೆರೆ ಬಿಜೆಪಿ ಅಧ್ಯಕ್ಷ ರುದ್ರೇಶ್‌ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದಲೂ ಒಂದಲ್ಲ ಒಂದು ತೊಂದರೆಯನ್ನ ಜನಸಾಮಾನ್ಯರಿಗೆ ನೀಡ್ತಾನೆ ಬಂದಿದೆ. ದಲಿತರ ಹಾಗೂ ಹಿಂದುಳಿದ ವರ್ಗದ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನ ಬಿಟ್ಟಿ ಭಾಗ್ಯಗಳಿಗೊಸ್ಕರ ದುರ್ಬಳಕೆ ಮಾಡಿಕೊಂಡ್ರು, ಗ್ಯಾರಂಟಿ ಯೋಜನೆಗಳಿಗಾಗಿ ಮಧ್ಯಮವರ್ಗದವರಿಗೆ, ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿಯನ್ನ ಸರ್ಕಾರ ನೀಡ್ತಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು. 

ಒಟ್ನಲ್ಲಿ ಕೊರಟಗೆರೆ ಪಟ್ಟಣದಲ್ಲಿ ಸರ್ಕಾರದ ವಿರುದ್ಧ ನಡೆದ ಬಿಜೆಪಿ ನಾಯಕರ ಪ್ರತಿಭಟನೆ ಯಶಸ್ವಿಯಾಗಿದ್ದು, ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

Author:

share
No Reviews