ಪಾವಗಡ: ಸರ್ಕಾರದ ವೈಫಲ್ಯತೆಯನ್ನ ವಿರೋಧಿಸಿ ಬಿಜೆಪಿ ಪ್ರತಿಭಟನೆ ..!

ಸರ್ಕಾರದ ವೈಫಲ್ಯತೆ ಖಂಡಿಸಿ ಬಿಜೆಪಿಯವರು ಪ್ರತಿಭಟನೆಯನ್ನು ಮಾಡಿರುವುದು.
ಸರ್ಕಾರದ ವೈಫಲ್ಯತೆ ಖಂಡಿಸಿ ಬಿಜೆಪಿಯವರು ಪ್ರತಿಭಟನೆಯನ್ನು ಮಾಡಿರುವುದು.
ತುಮಕೂರು

ಪಾವಗಡ:

ಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದು ಕೂಡಲೇ ವೈದ್ಯರನ್ನು ನೇಮಿಸಬೇಕು ಹಾಗೂ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಡ ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು, ಜನ ಔಷಧಿ ಕೇಂದ್ರವನ್ನು ನಿರಂತರವಾಗಿ ನಡೆಸಬೇಕು, ತಾಯಿ ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿರುವ ಹಳೆಯ ಕಟ್ಟಡದ ದುರಸ್ತಿ ಕಾರ್ಯವನ್ನು ಕೂಡಲೇ ಮುಗಿಸಿ ಅಲ್ಲೂ ಸಹ ವೈದ್ಯಕೀಯ ಸೌಲಭ್ಯವನ್ನು ಜನರಿಗೆ ನೀಡಬೇಕೆಂದು ಆಗ್ರಹಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಆಸ್ಪತ್ರೆಯಿಂದ ಶುರುವಾದ ಪ್ರತಿಭಟನಾ ಮೆರವಣಿಗೆ ಶನಿಮಹಾತ್ಮ ವೃತ್ತವನ್ನು ತಲುಪಿ ನಂತರ ತಹಶೀಲ್ದಾರ್ ಕಚೇರಿ ಬಳಿ ಹೋಗಿ ತಹಶೀಲ್ದಾರ್ ವರದರಾಜುರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಅಶೋಕ್, ತಾಲೂಕಿನಲ್ಲಿ ವೈದ್ಯಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಕಿರಣ್ ರವರು ನಮ್ಮ ತಾಲೂಕಿನವರೇ ಆಗಿದ್ದು ಆಸ್ಪತ್ರೆ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರೇ ಆಸ್ಪತ್ರೆಗೆ ಬೇಕಾದ ವೈದ್ಯರುಗಳನ್ನ ನೇಮಕ ಮಾಡಿಕೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಬೇಕಾಗಿತ್ತು. ಅದು ಬಿಟ್ಟು ಇಲ್ಲಿಗೆ ಬರುವ ವೈದ್ಯರಿಗೆ ಕಿರುಕುಳ ನಡೆಸುತ್ತಿದ್ದಾರೆ. ಇವರಿಂದಲೇ 15 ಜನ ವೈದ್ಯರು ಬಿಟ್ಟು ಹೋಗಿದ್ದಾರೆ. ಇವರು ಇಲ್ಲಿ ಕರ್ತವ್ಯ ನಿರ್ವಹಿಸಿದರೆ ತಾಲೂಕಿನ ಯಾವುದೇ ಆಸ್ಪತ್ರೆ ಉದ್ಧಾರವಾಗಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ದಿವಾಳಿಯಾಗಿದ್ದು ಯಾವುದೇ ಅಬಿವೃದ್ಧಿ ಕಾರ್ಯಗಳಿಗೆ ಅನುದಾನ ಇಲ್ಲ, ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗೆ ವೈದ್ಯರನ್ನು ನೇಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಜಿಲ್ಲಾ ಕೋರ್ ಕಮಿಟಿ ಸದಸ್ಯರಾದ ಡಾ.ವೆಂಕಟರಾಮಯ್ಯ ಸೇರಿದಂತೆ ಇನ್ನು ಹಲವರು ಉಪಸ್ಥಿತರಿದ್ದರು.

Author:

share
No Reviews