ಕೊರಟಗೆರೆ :
ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯರ ಮೇಲೆ ನಿತ್ಯ ಬೆಲೆ ಏರಿಕೆ ಬರೆ ಹಾಕ್ತಿದ್ದು, ಬೆಲೆ ಏರಿಕೆ ವಿರುದ್ಧ ಬಿಜೆಪಿ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಏಪ್ರಿಲ್ 25ರಂದು ಬೃಹತ್ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಇಂದು ಕೊರಟಗೆರೆಯಲ್ಲಿ ಬಿಜೆಪಿ ಮುಖಂಡ ಅನಿಲ್ ಕುಮಾರ್ ನೇತೃತ್ವದಲ್ಲಿ ಇಂದು ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು.
ಇನ್ನು ಕಾರ್ಯಕರ್ತರ ಸಭೆಯಲ್ಲಿ ನಿನ್ನೆ ನಡೆದ ಉಗ್ರರ ದಾಳಿಯ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ಘಟನೆಗೆ ರಾಜ್ಯ ಸರ್ಕಾರದ ವೈಫಲ್ಯತೆ ಪ್ರಮುಖ ಕಾರಣವಾಗಿದೆ. ಕಾಶ್ಮೀರಕ್ಕೆ ಹೋಗುವವರ ಬಗ್ಗೆ ಸರ್ಕಾರ ಜಾಗೃತಿ ವಹಿಸಬೇಕಿತ್ತು ಎಂದು ಸರ್ಕಾರದ ವಿರುದ್ದ ಬಿಜೆಪಿ ಮುಖಂಡರು ಕಿಡಿಕಾರಿದರು. ಅಲ್ದೇ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿ ಸಂವಿಧಾನ ಉಲ್ಲಂಘನೆ ಮಾಡಿದೆ ಎಂದು ಬಿಜೆಪಿ ಮುಖಂಡರು ಕಿಡಿಕಾರಿದರು.