ತುಮಕೂರು :
ಶುಕ್ರವಾರ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಸಿದ್ದರಾಮಯ್ಯ ಬಜೆಟ್ ಹಲಾಲ್ ಬಜೆಟ್ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸ್ತಾ ಇದ್ದಾರೆ. ತುಮಕೂರಿನಲ್ಲಿ ಇಂದು ಜಿಲ್ಲಾಧ್ಯಕ್ಷ ರವಿಕುಮಾರ್ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದ್ದು, ಟೌನ್ಹಾಲ್ನಿಂದ ಡಿಸಿ ಕಚೇರಿವರೆಗೂ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಡಿಸಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಬಿಜೆಪಿ ಪ್ರತಿಭಟನೆಯಲ್ಲಿ ದಲಿತ ಮುಖಂಡರು, ಬಿಜೆಪಿ ಕಾರ್ಯಕರ್ತರು, ಮಹಿಳೆಯರು ಸೇರಿದಂತೆ ಹಲವಾರು ಮಂದಿ ಭಾಗಿಯಾಗಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯ, ಹಿಂದೂ ವಿರೋಧಿ, ರೈತ ವಿರೋಧಿ, ಹಾಗೂ ದಲಿತ ವಿರೋಧಿ ಬಜೆಟ್ ಎಂದು ಘೋಷಣೆ ಕೂಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ವಿಜಯ್ ಬಿದರೆ, ಅಲ್ಪಸಂಖ್ಯಾತರ ತುಷ್ಠಿಕರಣಕ್ಕೆ ಒತ್ತು ನೀಡಲಾಗಿದೆ, ಹಿಂದೂ, ರೈತ, ದಲಿತ ಸಮುದಾಯಗಳ ಮೇಲಿನ ಅನ್ಯಾಯ ಆಗ್ತಿದೆ ಎಂದು ಆಕ್ರೋಶ ಹೊರಹಾಕಿದರು.