Bangalore : ಮೈಸೂರು ರಸ್ತೆಯಲ್ಲಿ ಮೆಟ್ರೋ ಪಿಲ್ಲರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ..!

BANGALORE: ಮೈಸೂರು ರಸ್ತೆಯ ಕೆಂಗೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ 607ಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಬಸ್‌ ಚಾಲಕ ಹಾಗೂ ಕಂಡಕ್ಟರ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಫಿಲ್ಲರ್‌ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಸ್‌ ಚಾಲಕ ಮತ್ತು ಕಂಡಕ್ಟರ್‌ ಅನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ.ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇನ್ನು ಅಪಘಾತದಿಂದ ಮೈಸೂರು ರಸ್ತೆಯಲ್ಲಿ ಕಿಲೋ ಮೀಟರ್‌ ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಪೊಲೀಸರು ಕ್ರೇನ್‌ ಮೂಲಕ ಬಸ್‌ ತೆರವುಗೊಳಸಿದ್ದಾರೆ.

ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews