ಚಿಕ್ಕಬಳ್ಳಾಪುರ :
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಶೆಟ್ಟಿಹಳ್ಳಿಯಿಂದ ಜಲದೇನಹಳ್ಳಿಗೆ ಹೋಗುವ ಅಡ್ಡದಾರಿಯ ಪಕ್ಕದಲ್ಲಿರುವ ಬೆಟ್ಟಗುಡ್ಡಗಳಲ್ಲಿ ಅಪರಿಚಿತ ವ್ಯಕ್ತಿಯ ಶವ ಅಸ್ತಿಪಂಜರ ರೂಪದಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದ ಗ್ರಾಮದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ, ಕುರಿ ಕಾಯಲು ಹೋದವರಿಗೆ ಅಸ್ಥಿಪಂಜರ ಪತ್ತೆಯಾಗಿದ್ದು ಶೆಟ್ಟಿಹಳ್ಳಿ ಗ್ರಾಮಸ್ಥರಿಗೆ ಹಾಗೂ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ದೌಡಾಯಿಸಿದ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಐ ಶಿವರಾಜ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಬೆರಳಚ್ಚು ತಜ್ಞರನ್ನು ಕರೆಸಿ, ಪರಿಶೀಲನೆ ನಡೆಸಿ ಅಸ್ತಿಪಂಜರವನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಈ ಘಟನೆಯಿಂದ ಶೆಟ್ಟಿಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಮೃತ ವ್ಯಕ್ತಿಯ ಶವವನ್ನು ನರಿನಾಯಿಗಳು ತಿಂದು ಹಾಕಿ ಅಸ್ತಿ ಪಂಜರ ಮಾತ್ರ ಸಿಕ್ಕಿತೋ. ಇಲ್ಲಾ ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದು ಪೊಲೀಸರ ತನಿಖೆಯಿಂದ ಮಾತ್ರ ಹೊರಬರಬೇಕಾಗಿದೆ.