ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಮನೆ ಬೀಗ ಮುರಿದು ಎರಡು ಮನೆಗಳಲ್ಲಿ ಕಳ್ಳತನ

ಕಲಬುರಗಿ : ಮನೆ ಬೀಗ ಮುರಿದು ಎರಡು ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರದಲ್ಲಿ ನಡೆದಿದೆ. ದೇವಲಗಾಣಗಾಪುರದ ಭೀಮರಾಯಗೌಡ , ರಜಿಯಾಬೇಗಂ ದಸ್ತಗೀರ್ ಎಂಬುವವರ ಮನೆ ಕಳ್ಳತನವಾಗಿದ್ದು, ಭೀಮರಾಯಗೌಡ ಮನೆಯಲ್ಲಿ 110 ಗ್ರಾಂನ ಲಕ್ಷ್ಮೀ ದೇವಿಯ ಬೆಳ್ಳಿ ಮೂರ್ತಿ ಚಿನ್ನ ಹಾಗೂ ನಗದು ಕಳ್ಳತನವಾಗಿದೆ. ರಜಿಯಾಬೇಗಂ ಮನೆಯಲ್ಲಿ 10 ಗ್ರಾಂ ಚಿನ್ನ, 30 ಗ್ರಾಂ ಬೆಳ್ಳಿ ಹಾಗೂ ನಗದು ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

ಇನ್ನು ಕಳ್ಳತನ ಮಾಡುವ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author:

...
Keerthana J

Copy Editor

prajashakthi tv

share
No Reviews