CRICKET : ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಿರುವ ವೆಸ್ಟ್ ಇಂಡೀಸ್ ಟಿ20 ಸರಣಿಯನ್ನು ಆಡುತ್ತಿದೆ. ಈ ವೇಳೆ ಇಂಗ್ಲೆಂಡ್ ತಂಡದ ಸೂಪರ್ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ ದಾಖಲೆಯನ್ನು ಬರೆದಿದ್ದಾರೆ. ಇವರು ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳಿಗೆ ತಮ್ಮ ಹೆಸರನ್ನು ನಮೂದಿಸಿದ್ದಾರೆ.
ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ, ಚೆಸ್ಟರ್ ಲೀ ಸ್ಟ್ರೀಟ್ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ 21 ರನ್‌ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ನಾಯಕ ಜೋಸ್ ಬಟ್ಲರ್ ಸ್ಫೋಟಕ ಬ್ಯಾಟಿಂಗ್ ಮಾಡಿ 96 ರನ್ ಗಳಿಸಿ ಮಿಂಚಿದರು.
ಬಟ್ಲರ್ ಈ ಸಾಧನೆಯ ಮೂಲಕ ಟಿ20 ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೆ, ಬಟ್ಲರ್ ತಮ್ಮ ಐದನೇ ಅರ್ಧಶತಕದ ಮೂಲಕ ರೋಹಿತ್ ಶರ್ಮಾ ಮತ್ತು ಬಾಬಾರ್ ಅಜಮ್ ಅವರ ದಾಖಲೆ ಸರಿಗಟ್ಟಿದ್ದಾರೆ.