ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತ | ಓರ್ವ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಸಮೀಪದಲ್ಲಿ ನಡೆದ ಕಾರು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಇನ್ನು ಈ ಅಪಘಾತ ಕಳೆದ ರಾತ್ರಿ 11:30ರ ಸುಮಾರಿಗೆ ಸಂಭವಿಸಿದೆ. ಯನಮಲಪಾಡಿಯಿಂದ ಬಟ್ಲಹಳ್ಳಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ಅತಿವೇಗ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಕೋಲಾರ ಜಿಲ್ಲೆಯ ಗೌನಿಪಲ್ಲಿ ಮೂಲದ ಆದರ್ಶ (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಬಟ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಅಪಘಾತ ಚಾಲಕರ ಅತಿವೇಗ ಹಾಗೂ ಜಾಗರೂಕತೆಯ ಕೊರತೆಯಿಂದ ಸಂಭವಿಸಿದೆ.

 

Author:

...
Keerthana J

Copy Editor

prajashakthi tv

share
No Reviews